ಉದಯನಿಧಿ ಸ್ಟಾಲಿನ್ ತಲೆ ಕಡಿದು ತಂದವರಿಗೆ 10 ಕೋಟಿ ರೂ. ಬಹುಮಾನ: ಅಯೋಧ್ಯೆಯ ಹಿಂದೂ ಧರ್ಮದರ್ಶಿಯಿಂದ ಪ್ರಚೋದನಕಾರಿ ಘೋಷಣೆ

ಲಕ್ನೋ: ಅಯೋಧ್ಯೆಯ ಹಿಂದೂ ಧರ್ಮದರ್ಶಿಯೊಬ್ಬರು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ತಲೆ ಕಡಿದು ತರುವಂತೆ 10 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ. ಪ್ರಚೋದನಕಾರಿ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ.
ಅಯೋಧ್ಯೆಯ ಧರ್ಮದರ್ಶಿ ಪರಮಹಂಸ ಆಚಾರ್ಯ, ಒಂದು ಕೈಯಲ್ಲಿ ಉದಯನಿಧಿಯ ಪೋಸ್ಟರ್, ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದುಕೊಂಡು ಉದಯನಿಧಿ ಅವರ ಶಿರಚ್ಛೇದನವನ್ನು ಸಾಂಕೇತಿಕವಾಗಿ ಪ್ರದರ್ಶಿಸುವ ವೀಡಿಯೊವನ್ನ ಬಿಡುಗಡೆ ಮಾಡಿದ್ದಾರೆ. ಪೋಸ್ಟರ್‌ಗೆ ಬೆಂಕಿ ಹಚ್ಚುವ ದೃಶ್ಯವನ್ನೂ ವೀಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಡಿಎಂಕೆ ಸಚಿವರ ತಲೆ ಕಡಿದು ತಂದವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.