ಕುಂದಾಪುರ: ಡೇರಿಗೆ ಹಾಲು ನೀಡಲು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಅಪಘಾತ: ರೈತ ಸಾವು
ಕುಂದಾಪುರ: ಕೋಟ ಎಂಬಲ್ಲಿನ ಯಡ್ತಾಡಿ ಗೋಳಿಮರ ಸಮೀಪ ಸೆ. 3ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾವಡಿ ಹವರಾಲು ನಿವಾಸಿ ಭುಜಂಗ ಶೆಟ್ಟಿ (83) ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
ಅವರು ಡೇರಿಗೆ ಹಾಲು ನೀಡಲು ಸ್ಕೂಟಿಯಲ್ಲಿ ತೆರಳುತ್ತಿದ್ದ ಸಂದರ್ಭ ಇನ್ನೊಂದು ಸ್ಕೂಟಿ ಢಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಭುಜಂಗ ಶೆಟ್ಟಿಯವರು ಗಂಭೀರವಾಗಿ ಗಾಯಗೊಂಡಿದ್ದರು.
ತತ್‌ಕ್ಷಣ ಅವರನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.




