ಸುರತ್ಕಲ್: ವ್ಯಕ್ತಿಗೆ ಚಾಕು ಇರಿತ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಮಂಗಳೂರು: ಸುರತ್ಕಲ್‌ನ ಕಳವಾರು ಬಸ್ ನಿಲ್ದಾಣದ ಬಳಿ ನಡೆದಿದ್ದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಿನ್ನಿಕಂಬಳ ಕೈಕಂಬ ನಿವಾಸಿ ಪುನೀತ್ (29) ಪೊಲೀಸರ ವಶದಲ್ಲಿರುವ ಆರೋಪಿ. ಪುನೀತ್ ಬಂಧನದಿಂದ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಈ ಪ್ರಕರಣದಲ್ಲಿ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತಲೆಮರೆಸಿಕೊಂಡಿರುವ ಇತರ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.




