ಡಿವೈಡರ್‌ಗೆ ಢಿಕ್ಕಿ ಹೊಡೆದ ಕಾರು: ಇಬ್ಬರು ಮೃತ್ಯು, ಓರ್ವ ಗಂಭೀರ
ಚಿಕ್ಕಮಗಳೂರು: ಬುಧವಾರ ನಗರದ ಹೊರವಲಯದ ಕಾನ್ಯೆ ಕ್ರಾಸ್ ಬಳಿ ತಾವು ಪ್ರಯಾಣಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ವಿಜಯಪುರ ಲೇಔಟ್ ನಿವಾಸಿಗಳಾದ ನಿರಂಜನ್ (42) ಮತ್ತು ಚೆನ್ನಮ್ಮ (67) ಎಂದು ಗುರುತಿಸಲಾಗಿದೆ.
ಮತ್ತೋರ್ವ ಮಹಿಳೆ ರತ್ನಮ್ಮ ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಮಗಳೂರು ಕಡೆಯಿಂದ ಕಡೂರು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.





