ಪುತ್ತೂರು: ಮನೆ ಮಂದಿಯನ್ನು ಕಟ್ಟಿ ಹಾಕಿ, ಫಿಲ್ಮಿ ಸ್ಟೈಲ್‌ನಲ್ಲಿ ದರೋಡೆ
ಮಂಗಳೂರು: ಮನೆಯೊಂದನ್ನು ನುಗ್ಗಿದ ಖತರ್ನಾಕ್ ದರೋಡೆಕೋರರ ಗ್ಯಾಂಗ್ ಒಂದು ಮನೆ ಮಂದಿಯನ್ನು ಕಟ್ಟಿ ಹಾಕಿ, ಫಿಲ್ಮಿ ಸ್ಟೈಲ್‌ನಲ್ಲಿ ದರೋಡೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕುದ್ಕಾಡಿ ಎಂಬಲ್ಲಿ ನಡೆದಿದೆ.
ಗುರುಪ್ರಸಾದ್ ರೈ ಎಂಬವರಿಗೆ ಸೇರಿದ ಮನೆಗೆ ನುಗ್ಗಿದ ಸುಮಾರು 8 ಜನರ ಗ್ಯಾಂಗ್ ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದನ್ನು ಎಗರಿಸಿದ್ದಾರೆ. ಮನೆಯಲ್ಲಿ ಗುರುಪ್ರಸಾದ್ ಹಾಗೂ ಅವರ ತಾಯಿ ಇದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಗುರುಪ್ರಸಾದ್ ಕುತ್ತಿಗೆಗೆ ಚಾಕು ಹಿಡಿದು ಮನೆ ದರೋಡೆ ಮಾಡಿದ್ದಾರೆ.





