March 21, 2026

ಬಿಜೆಪಿ ಜೊತೆಗಿನ ಮೈತ್ರಿಯಿಂದ ಮುಂಬರುವ ಚುನಾವಣೆಯಲ್ಲಿ ಗೆಲ್ಲುತ್ತೇವೆ: ಮಾಜಿ ಸಿಎಂ ಅಮರಿಂದರ್ ಸಿಂಗ್

0

ಪಂಜಾಬ್: ಬಿಜೆಪಿ ಮತ್ತು ಶಿರೋಮಣಿ ಅಕಾಲಿ ದಳ (ಸಂಯುಕ್ತ) ಜೊತೆಗಿನ ಮೈತ್ರಿಯಿಂದ ತಮ್ಮ ಪಕ್ಷ ಪಂಜಾಬ್ ಲೋಕ್ ಕಾಂಗ್ರೆಸ್ ಮುಂಬರುವ ಚುನಾವಣೆಯಲ್ಲಿ ಗೆದ್ದು ಪಂಜಾಬ್‌ನಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೇಳಿದ್ದಾರೆ.

ತಮ್ಮ ಪ್ರತಿಸ್ಪರ್ಧಿ ನವಜೋತ್ ಸಿಂಗ್‌ ಸಿಧು ಜೊತೆಗಿನ ಗುದ್ದಾಟದ ಕಾರಣಕ್ಕಾಗಿ ಸೆಪ್ಟಂಬರ್ 18 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅಮರಿಂದರ್ ಸಿಂಗ್ ಅಕ್ಟೋಬರ್ ತಿಂಗಳಿನಲ್ಲಿ ಪಂಜಾಬ್ ಲೋಕ್ ಕಾಂಗ್ರೆಸ್ ಎಂಬ ಪಕ್ಷ ಸ್ಥಾಪಿಸಿದ್ದಾರೆ. ಕೃಷಿ ಕಾನೂನುಗಳನ್ನು ಹಿಂತೆಗೆದುಕೊಂಡಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತೇನೆ ಎಂದಿದ್ದ ಅವರು ಅದನ್ನು ಪುನರುಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!