ಮಸೂದ್ ಕೊಲೆ ಪ್ರಕರಣ: ಆರೋಪಿಗಳಾದ ರಂಜಿತ್, ಸದಾಶಿವ ಸಹಿತ ಮೂವರಿಗೆ ಜಾಮೀನು
ಸುಳ್ಯ: ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಳಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳಾದ ರಂಜಿತ್, ಸದಾಶಿವ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್ ಶಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ಮಾಡಿದ್ದರು. ಒಟ್ಟು ಎಂಟು ಆರೋಪಿಗಳ ಪೈಕಿ ಈ ಮೊದಲು ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು.





