March 16, 2026

ಬೈಬಲ್‌ಗಳನ್ನು ವಿತರಿಸುವುದು, ಉತ್ತಮ ಶಿಕ್ಷಣ ನೀಡುವುದನ್ನು ಮತಾಂತರಕ್ಕೆ ಪ್ರೇರಣೆ ಆಗದು: ಹೈಕೋರ್ಟ್

0
image_editor_output_image-701374449-1694150606205.jpg

ದೆಹಲಿ: ಬೈಬಲ್‌ಗಳನ್ನು ವಿತರಿಸುವುದು ಮತ್ತು ಉತ್ತಮ ಶಿಕ್ಷಣ ನೀಡುವುದನ್ನು ಮತಾಂತರಕ್ಕೆ ಪ್ರೇರಣೆ ಎಂದು ಹೇಳಲಾಗದು. ಇದು ಉತ್ತರ ಪ್ರದೇಶದ ಕಾನೂನುಬಾಹಿರ ಮತಾಂತರ ನಿಷೇಧ ಕಾಯಿದೆಯಡಿ ಅಪರಾಧ ಎಂದು ಕರೆಯಲು ಬರುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸುವಂತೆ ಆಮಿಷ ಒಡ್ಡುತ್ತಿದ್ದಾರೆ ಎಂದು ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಹೈಕೋರ್ಟ್ ಇಬ್ಬರು ಆರೋಪಿಗಳಿಗೆ ಜಾಮೀನು ನೀಡಿದೆ.

ಕೆಳ ನ್ಯಾಯಾಲಯ ಆರೋಪಿಗಳಿಗೆ ಜಾಮೀನು ತಿರಸ್ಕರಿಸಿತ್ತು. ಈ ಸಂಬಂಧ ಜೋಸ್ ಪಾಪಚೆನ್ ಮತ್ತು ಶೀಜಾ ಅವರ ಮೇಲ್ಮನವಿಯನ್ನು ನ್ಯಾಯಮೂರ್ತಿ ಶಮೀಮ್ ಅಹ್ಮದ್ ಅವರ ಪೀಠವು ಅಂಗೀಕರಿಸಿತು.

ಅಂಬೇಡ್ಕರ್ ನಗರ ಜಿಲ್ಲೆಯ ಬಿಜೆಪಿ ಪದಾಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಜನವರಿ 24 ರಂದು ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಮೇಲ್ಮನವಿದಾರರನ್ನು ಜೈಲಿಗೆ ಕಳುಹಿಸಲಾಯಿತು.

Leave a Reply

Your email address will not be published. Required fields are marked *

error: Content is protected !!