July 3, 2026

ಉಳ್ಳಾಲ: ಸರಣಿ ಅಪಘಾತ: ಕಾರು ಚಾಲಕ ಅಪಾಯದಿಂದ ಪಾರು
 

0
image_editor_output_image2103390947-1694263939704.jpg


ಉಳ್ಳಾಲ: ಕಾರು ಚಾಲಕನೋರ್ವ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಸರಣಿ ಅಪಘಾತ ರಾಷ್ಟ್ರೀಯ ಹೆದ್ದಾರಿ 66ರ ಜೆಪ್ಪುವಿನ ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಮೀಪದಲ್ಲೇ ಸಂಭವಿಸಿದೆ.

ಕಾರು, ಲಾರಿ, ಬಸ್‌ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾನೆ.

ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದ್ದಾರೆ. ಪರಿಣಾಮ ಹಿಂಬದಿಯಲ್ಲಿದ್ದ ಲಾರಿ ಕಾರಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಅದೇ ವೇಳೆ ಲಾರಿ ಹಿಂಭಾಗದಲ್ಲಿದ್ದ ಕಾರು, ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಅದರ ಹಿಂಭಾಗದಲ್ಲಿದ್ದ ಬಸ್ಸು ಕಾರಿಗೆ ಢಿಕ್ಕಿ ಹೊಡೆದ ಕಾರಣ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಲಾರಿ ಹಾಗೂ ಬಸ್ ನಡುವೆ ಸಿಲುಕಿದ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಅಪ್ಪಚ್ಚಿಯಾಗಿದೆ. ಉಳಿದ ವಾಹನಗಳ ಹಿಂಭಾಗಕ್ಕೆ ಹಾನಿಯಾಗಿದೆ. ಅಪ್ಪಚ್ಚಿಯಾದ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಆತ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾನೆ. ಎಲ್ಲಾ ವಾಹನಗಳಲ್ಲಿದ್ದ ಐದು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಅಪಘಾತಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!