February 3, 2026

ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಹೃದಯಾಘಾತದಿಂದ ನಿಧನ

0
image_editor_output_image-309028261-1694362571037.jpg

ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ಹಾಗೂ ಕನ್ನಡ ಹೋರಾಟಗಾರ ಎಸ್. ವಿ ಭಟ್ (72) ಅವರು ಹೃದಯಾಘಾತದಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಮಧ್ಯಾಹ್ನ ನಿಧನರಾಗಿದ್ದಾರೆ.

ಬೀರಂತಬೈಲ್ ನಿವಾಸಿಯಾಗಿದ್ದ ಭಟ್ ರವರು ಕುಂಬಳೆ, ಅಡೂರು, ಕಾಸರಗೋಡು ಸೇರಿದಂತೆ ಜಿಲ್ಲೆಯ ಹಲವೆಡೆ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿ ಯಾಗಿಯೂ ಸೇವೆ ಸಲ್ಲಿಸಿದ್ದರು. ಮೂರು ಬಾರಿ ಕಸಾಪದ ಗಡಿನಾಡ ಘಟಕ ಅಧ್ಯಕ್ಷರಾಗಿ ಆಯ್ಕೆಯಾಗಿ , ಕನ್ನಡ ಹೋರಾಟ, ಸಮ್ಮೇಳನ ಹಾಗೂ ವಿವಿಧ ಕನ್ನಡ ಪರ ಕಾರ್ಯಕ್ರಮಗಳ ಆಯೋಜನೆಯಲ್ಲಿ ಮುಂಚೂಣಿಯಲ್ಲಿದ್ದರು.

ಇನ್ನು ಬದಿಯಡ್ಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮರಳುತ್ತಿದ್ದಾಗ ದಾರಿ ಮಧ್ಯೆ ಎದೆ ನೋವು ಕಾಣಿಸಿಕೊಂಡಿದ್ದು, ಕಾಸರಗೋಡಿನ ಆಸ್ಪತ್ರೆಗೆ ತಲಪಿಸಲಾಯಿತಾದರೂ ಜೀವ್ ಉಳಿಸಲಾಗಲಿಲ್ಲ.

ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!