February 3, 2026

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದ ಮಹಿಳೆ ಸಾವು

0
image_editor_output_image-1827974873-1694496388896.jpg

ಬೆಂಗಳೂರು: ಋತುವಿನ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಯಲ್ಲಿ 3 ದಿನಗಳಿಂದ ಚಿಕಿತ್ಸೆ ಪಡೆದರೂ ಅದು ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಬಿಹಾರ ಮೂಲದ ನೋವಾಕುಮಾರಿ (25) ಮೃತ ಮಹಿಳೆ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಆರ್ಮೋರ್ ಪ್ಲಾಸ್ಟಾ ಮೆಡಿ ಡಿವೈಸ್ ಕಂಪನಿಯಲ್ಲಿ ಆಕೆ ಕೆಲಸ ಮಾಡುತ್ತಿದ್ದರು.

ಋತುವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅತ್ತಿಬೆಲೆ ಸಮೀಪದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಸೋಮವಾರ ಅವರನ್ನು ಆಪರೇಶನ್ ಥಿಯೇಟರ್‌ಗೆ ಕರೆದುಕೊಂಡು ಹೋಗಿ 2 ಗಂಟೆಗಳ ಬಳಿಕ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!