ರಕ್ತ ಚಂದನ ಸಾಗಾಟ ಮಾಡುತ್ತಿದ್ದ ಇನ್ನೋವಾ ಕಾರು ಪಲ್ಟಿ
ಚಿಕ್ಕಬಳ್ಳಾಪುರ: ಆಂದ್ರದ ಕಡಪದಿಂದ ಬೆಂಗಳೂರಿಗೆ ರಕ್ತ ಚಂದನ ಸಾಗಾಟ ಮಾಡುತ್ತಿದ್ದ ಇನ್ನೋವಾ ಕಾರು ಬೆಂಗಳೂರು ಹೈದರಾಬಾದ್ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಬಳಿ ಇಂದು ಬೆಳಗ್ಗೆ 7 ಗಂಟೆ ಸಮಯಕ್ಕೆ ಈ ಘಟನೆ ನಡೆದಿದೆ.
ಬೆಂಗಳೂರಿನ ಬಾಷಾ ಎಂಬುವರಿಗೆ ಮಾರಾಟ ಮಾಡಲು ಅಕ್ರಮವಾಗಿ ರಕ್ತಚಂದನ ತುಂಡುಗಳನ್ನು ಇನ್ನೋವಾ ಕಾರಿನಲ್ಲಿ ಇರಿಸಿಕೊಂಡು ಸಾಗಾಟ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.




