February 4, 2026

ಕಾಸರಗೋಡು: ಒಂದೂವರೆ ತಿಂಗಳ ಹಸುಗೂಸನ್ನು ಹತ್ಯೆಗೈದ ತಾಯಿ

0
baby-feet-closeup.jpg


 
ಕಾಸರಗೋಡು: ಒಂದೂವರೆ ತಿಂಗಳ ಹೆಣ್ಣು ಮಗುವನ್ನು ತಾಯಿ ಕೆಸರು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ದಾರುಣ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಉಪ್ಪಳ ಪಚ್ಲಂಪಾರೆ ಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಸುಮಂಗಲಿ – ಸತ್ಯನಾರಾಯಣ ದಂಪತಿ ಯ ಒಂದೂವರೆ ತಿಂಗಳ ಮಗು ಮೃತ ಪಟ್ಟವಳು.

ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದೆ . ತಾಯಿ ಮತ್ತು ಮಗು ನಾಪತ್ತೆ ಯಾದುದರಿಂದ ಮನೆ ಯವರು ಶೋಧ ನಡೆಸಿದಾಗ ತಾಯಿ ಯನ್ನು ಮನೆಯ ಅಲ್ಪ ದೂರದಿಂದ ಪತ್ತೆ ಹಚ್ಚಲಾಗಿದ್ದು, ಮಗು ನಾಪತ್ತೆಯಾಗಿತ್ತು. ವಿಚಾರಿಸಿದಾಗ ಮಗುವನ್ನು ಸಮೀಪದ ಬಯಲಿನಲ್ಲಿ ಕೆಸರು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿರುವುದಾಗಿ ತಿಳಿಸಿದ್ದಳು ಎನ್ನಲಾಗಿದೆ .ಕೂಡಲೇ ಮಗುವನ್ನು ಮೇಲಕ್ಕೆತ್ತಿ ಉಪ್ಪಳದ ಮಂಗಲ್ಪಾಡಿ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿತ್ತು.

ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದು, ಮಹಿಳೆಯನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ. ಮಹಿಳೆ ಮಾನಸಿಕ ಅಸ್ವಸ್ಥೆತೆಯಂತೆ ವರ್ತಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೇರೆ ಯಾವುದಾದರೂ ಕಾರಣ ಇದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.”

Leave a Reply

Your email address will not be published. Required fields are marked *

error: Content is protected !!