ಉಳ್ಳಾಲ: ದ್ವಿಚಕ್ರ ವಾಹನದಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ, ಓರ್ವನ ಬಂಧನ
ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಒಂಬತ್ತು ಕರೆ ಬಳಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ.
ಬಂಧಿತನನ್ನು ಒಂಭತ್ತು ಕೆರೆ ನಿವಾಸಿ ಅಬ್ದುಲ್ ಸವಾಜ್ ಯಾನೆ ಚವ್ವಾ (30) ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಯಿಂದ 25 ಗ್ರಾಂ ತೂಕದ ರೂ. 1,25,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೊಂಡಾ ಅಕ್ಟಿವಾ ಸ್ಕೂಟರ್, ಒಂದು ಮೊಬೈಲ್ ಫೋನ್, 2120 ರೂ. ನಗದು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಂಡಿದ್ದಾರೆ.





