March 16, 2026

ವಿಟ್ಲ: ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

0
IMG-20230913-WA0030.jpg

ವಿಟ್ಲ: ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ.

ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿರಾಜ್ ವಿಷ ಸೇವನೆ ಮಾಡಿದ ಸಹೋದರರು ಎಂದು ತಿಳಿದು ಬಂದಿದೆ.

ಎರಡು ಪ್ರತ್ಯೇಕ ತುರ್ತುವಾಹನಗಳ ಮೂಲಕ ಅಸ್ವಸ್ಥರನ್ನು ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು, ಅವರಲ್ಲಿ ಓರ್ವ ಗಂಭೀರವಾಗಿದ್ದು, ಆತನನ್ನು ಮಂಗಳೂರು ಆಸ್ಪತ್ರೆಗೆ ಹಾಗೂ ಇನ್ನೋರ್ವನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಸಹೋದರರ ತಂದೆ ಮೃತಪಟ್ಟಿದ್ದು, ತಾಯಿ ಮೈರದಲ್ಲಿ ವಾಸವಾಗಿದ್ದಾರೆ. ಇವರಿಬ್ಬರು ಅಜ್ಜಿ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..

Leave a Reply

Your email address will not be published. Required fields are marked *

error: Content is protected !!