September 26, 2026

ಕಾಸರಗೋಡು: ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ: ಮೂವರು ಪೊಲೀಸರ ವಶಕ್ಕೆ

0
IMG-20230504-WA0062.jpg


 ಕಾಸರಗೋಡು : ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎಂಡಿಎಂಎ ಮಾದಕ ವಸ್ತು ಸಹಿತ ಮಹಿಳೆ ಸೇರಿದಂತೆ ಮೂವರನ್ನು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮುಟ್ಟತ್ತೋಡಿಯ ಖಮರು ನ್ನಿಸಾ (42), ಪಿ. ಎ ಮುಹಮ್ಮದ್ ಶರೀಫ್ (40) ಮತ್ತು ಚೇರೂರಿನ ಮುಹಮ್ಮದ್ ಇರ್ಷಾದ್ (38) ಬಂಧಿತರು.

 

ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ವಾಹನ ತಪಾಸಣೆ ನಡೆಸಿದ ಪೊಲೀಸರು ಕಾರನ್ನು ತಡೆದು ಪರಿಶೀಲಿ ಸಿದಾಗ ಮಾದಕ ವಸ್ತು ಪತ್ತೆಯಾಗಿದೆ.

ಕಾರಿನಿಂದ 3.99 ಗ್ರಾಂ ಎಂಡಿಎಂಎ ಮಾದಕ ವಸ್ತು ವನ್ನು ವಶಪಡಿಸಿಕೊಳ್ಳಲಾಗಿದೆ. ಮಾರಾಟಕ್ಕೆ ಕೊಂಡೊಯ್ಯುತ್ತಿದ್ದುದಾಗಿ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!