March 16, 2026

ಬಿಜೆಪಿ-ಜೆಡಿಎಸ್‌ ಮೈತ್ರಿ ವಿಚಾರ: ಕೇಂದ್ರ ನಾಯಕರಿಗೆ ನಿರ್ಧಾರ ಬಿಟ್ಟಿದ್ದು, ನನ್ನ ಅಭಿಪ್ರಾಯವಿಲ್ಲ: ಬಿಎಸ್ ಯಡಿಯೂರಪ್ಪ ಸ್ಪಷ್ಟನೆ

0
IMG-20230913-WA0033.jpg

ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಕೈಜೋಡಿಸುವ ಕುರಿತು ಚರ್ಚೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಕೇಂದ್ರ ನಾಯಕರು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಮೈತ್ರಿ ಕುರಿತು ಮೋದಿಜಿ ಮತ್ತು ಅಮಿತ್ ಶಾಜಿ ಅವರ ಮನಸ್ಸಿನಲ್ಲಿ ಏನಿದೆ ಎಂದು ನಮಗೆ ತಿಳಿದಿಲ್ಲ. ಚರ್ಚೆಗಳು ನಡೆಯುತ್ತಿವೆ. ಸೀಟು ಹಂಚಿಕೆ ನಿರ್ಧಾರ ಕೇಂದ್ರ ನಾಯಕರಿಗೆ ಬಿಟ್ಟಿದ್ದು, ಈ ವಿಚಾರದಲ್ಲಿ ನನ್ನ ಯಾವುದೇ ಅಭಿಪ್ರಾಯವಿಲ್ಲ ಅಥವಾ ಸಲಹೆ ನೀಡುವುದಿಲ್ಲ ಎಂದರು.

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 25-26 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ರಾಜ್ಯಾದ್ಯಂತ ಜಿಲ್ಲಾ ಕಾರ್ಯಕರ್ತರ ಸಭೆ ನಡೆಸಲಾಗುವುದು. ಇಂಡಿಯಾ ಮೈತ್ರಿ ಕೂಟ ಮೋದಿ ಅವರ ಮುಂದೆ ಶೂನ್ಯ. ನಾವು ಸಂಪೂರ್ಣ ಬಹುಮತ ಪಡೆಯುತ್ತೇವೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದರು

Leave a Reply

Your email address will not be published. Required fields are marked *

error: Content is protected !!