September 26, 2026

ಕೋಟ್ಯಾಂತರ ರೂ. ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಸೇರಿ ಆರು ಮಂದಿ ಸೆ.23ರವರೆಗೆ ಸಿಸಿಬಿ ಕಸ್ಟಡಿಗೆ

0
Chaitra-Kundapura-1-1200x900.jpg


 
ಬೆಂಗಳೂರು: ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ನೀಡುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಆರು ಆರೋಪಿಗಳನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ಆದೇಶಿಸಲಾಗಿದೆ.

ಪ್ರಕರಣ ಸಂಬಂಧ ಕರಾವಳಿ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್, ಧನರಾಜ್ ನನ್ನು ಬಂಧಿಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು ಇಂದು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ ಗೆ ಹಾಜರುಪಡಿಸಿತ್ತು.

 

ಈ ವೇಳೆ ಆರೋಪಿಗಳನ್ನು 14 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದರು. ಆದರೆ ಕೋರ್ಟ್ ಆರು ಮಂದಿ ಆರೋಪಿಗಳಿಗೂ 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ.

ಆರೋಪಿಗಳು ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!