March 16, 2026

ಮಂಗಳೂರು: ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ

0
image_editor_output_image416174705-1694768107702.jpg

ಮಂಗಳೂರು: ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿದ್ದ ಮಹೇಶ್(31) ಎಂಬವರು ಆತ್ಮಹತ್ಯೆ ಮಾಡಿಕೊಂಡವರು.

ಇವರು ಮೂಲತಃ ಗದಗ ಜಿಲ್ಲೆಯವರು. ಇವರು ಮಂಗಳೂರು ನಗರದ ಕಪಿತಾನಿಯೋದಲ್ಲಿ ಬಾಡಿಗೆ ಮನೆಯಲ್ಲಿ ಇನ್ನೋರ್ವ ಪೊಲೀಸ್ ಸಿಬ್ಬಂದಿಯೊಂದಿಗೆ ವಾಸವಾಗಿದ್ದರು ಎನ್ನಲಾಗಿದೆ. ಕೌಟುಂಬಿಕ ಕಲಹವೇ ಮಹೇಶ್ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ.

ಒಂದೂವರೆ ತಿಂಗಳ ಹಿಂದೆಯಷ್ಟೇ ಮಹೇಶ್ ವಿವಾಹವಾಗಿದ್ದರು ಎನ್ನಲಾಗಿದೆ. ಕುಟುಂಬ ಸದಸ್ಯರು ಆಗಮಿಸಿದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!