ಸಾಬೂನು ನೊರೆ ಬಾಯಿಗೆ ಹಾಕಿ ಮೂರ್ಛೆ ಬಂದಂತೆ ನಟಿಸಿದ ಚೈತ್ರಾ ಕುಂದಾಪುರ
ಬೆಂಗಳೂರು: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾಗಲೇ ಬಾಯಲ್ಲಿ ನೊರೆ ಬಂದು ಕುಸಿದು ಬಿದ್ದಿದ್ದರು. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚೈತ್ರಾ ಅವರಿಗೆ ಪಿಡ್ಸ್ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ ಬಟ್ಟೆ ತೊಳೆಯಲು ಕೊಟ್ಟ ಸಾಬೂನಿನ ನೊರೆಯನ್ನು ಬಾಯಿಗೆ ಹಾಕಿರುವ ಶಂಕೆ ವ್ಯಕ್ತವಾದ ಹಿನ್ನೆಲೆ ಸಿಸಿಬಿ ಕಚೇರಿಯಲ್ಲಿರುವ ವಾಶ್ ರೂಮ್ ಅನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಅದಾಗ್ಯೂ, ಮುನ್ನೆಚ್ಚರಿಕೆ ಸಲುವಾಗಿ ಚೈತ್ರಾ ಕುಂದಾಪುರ ಅವರ ಆರೋಗ್ಯವನ್ನು ಎಲ್ಲಾ ರೀತಿಯಲ್ಲಿ ತಪಾಸಣೆ ನಡೆಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅದರಂತೆ, ಬಿಪಿ, ಪಲ್ಸ್ ರೇಟ್ ನಾರ್ಮಲ್ ಇದೆ. ಅದರೂ ಮೂರ್ಛೆ ರೋಗಕ್ಕೆ ಸಂಬಂಧಿಸಿದ ತಪಾಸಣೆಗಳು, ಬಿಪಿ, ಹೃದಯ ಸಂಬಂಧಿ ಚೆಕಪ್, ಉಸಿರಾಟದ ಸಮಸ್ಯೆ ಸೇರಿದಂತೆ ಎಲ್ಲ ರೀತಿಯ ಪರೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ.




