March 16, 2026

ಕಾಸರಗೋಡು: ತಾಯಿ-ಮಗಳ ಮೃತದೇಹ ಬಾವಿಯಲ್ಲಿ ಪತ್ತೆ: ಆತ್ಮಹತ್ಯೆ ಶಂಕೆ

0
IMG_20230915_195256.jpg


 
ಕಾಸರಗೋಡು: ತಾಯಿ ಮತ್ತು ಮಗಳ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಉದುಮ ಸಮೀಪದ ಕಳ್ನಾಡ್ ನಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಕಳ್ನಾಡ್ ಅರಮಂಗಾನದ ತಾಜುದ್ದೀನ್ ರವರ ಪತ್ನಿ ರುಬೀನಾ (33) ಮತ್ತು ಪುತ್ರಿ. ಹನಾನ್ ಮರಿಯಾ (5) ಮೃತ ಪಟ್ಟವರು.

ಮಧ್ಯಾಹ್ನ 12 ಗಂಟೆ ಯಿಂದ ಇಬ್ಬರು ನಾಪತ್ತೆಯಾಗಿದ್ದು,ಇದರಿಂದ ಶೋಧ ನಡೆಸಿದಾಗ ಮನೆ ಸಮೀಪದ ಬಾವಿಯಲ್ಲಿ ಇಬ್ಬರ ಮೃತ ದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿದೆ.

ಮೇಲ್ಪರಂಬ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದು, ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದರು. ಮೃತ ದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಪತಿ ತಾಜುದ್ದೀನ್ ಗಲ್ಫ್ ಉದ್ಯೋಗಿ ಎನ್ನಲಾಗಿದೆ.

ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!