February 3, 2026

ಮಹಿಳಾ ಪಿಎಸ್ಐ ಪುತ್ರನ ವ್ಹೀಲಿಂಗ್ ಹುಚ್ಚಾಟಕ್ಕೆ ವೃದ್ಧ ಬಲಿ

0
IMG-20230917-WA0003.jpg



ಮೈಸೂರು: ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಿಮ್ಮಾವು ಬಳಿ ಮಹಿಳಾ ಪಿಎಸ್ಐ ಪುತ್ರನ ದ್ವಿಚಕ್ರ ವಾಹನ ವ್ಹೀಲಿಂಗ್ ಹುಚ್ಚಾಟಕ್ಕೆ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ಸೈಯ್ಯದ್ ಐಮಾನ್ನನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ.

ಇನ್ನು ಸೈಯ್ಯದ್ ನಂಬರ್ ಪ್ಲೇಟ್ ಇಲ್ಲದ ಬೈಕ್ನಲ್ಲಿ ವ್ಹೀಲಿಂಗ್ ಮಾಡಿದ್ದು, ಉದಯಗಿರಿ ನಿವಾಸಿ ವೃದ್ಧ ಗುರುಸ್ವಾಮಿ ಅವರಿಗೆ ಡಿಕ್ಕಿ ಹೊಡೆದಿದ್ದು ಗಂಭೀರವಾಗಿ ಗಾಯಗೊಂಡ ಗುರುಸ್ವಾಮಿ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಆತ ಘಟನೆಯ ಬಳಿಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದಾಗ ಹಿಡಿದ ಸ್ಥಳೀಯರು ವಿಚಾರಣೆ ನಡೆಸಿದಾ ತಾನು ನಂಜನಗೂಡು ಸಂಚಾರಿ ಪೊಲೀಸ್ ಠಾಣೆ ಪಿಎಸ್ಐ ಯಾಸ್ಮಿನ್ ತಾಜ್ ಅವರ ಪುತ್ರ ಎಂದು ಹೇಳಿದ್ದಾನೆ.

ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದರಿಂದ ಸೈಯ್ಯದ್ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!