February 3, 2026

ಬಂಟ್ವಾಳ: ಪುರಸಭಾ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಪತ್ತೆ: ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ

0
IMG-20230917-WA0004.jpg



ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದ್ದು, ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಚಿಪ್ಪು, ಗಿರಟೆ, ಟೈಯರ್ ಮುಂತಾದ ವಸ್ತುಗಳನ್ನು ಗುರುತಿಸಿ ಮನೆಯ ಸುತ್ತ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಪುರಸಭೆಯ ಮುಖ್ಯ ಅಧಿಕಾರಿ ತಿಳಿಸಿದ್ದಾರೆ.

ಇನ್ನು ಜ್ವರ, ವಾಂತಿ, ವಾಕರಿಕೆ, ತೀವ್ರ ಮೈಕೈ ನೋವು ತಲೆ ನೋವು ಇದ್ದಲ್ಲಿ ವೈದ್ಯದಿಂದ ಪರೀಕ್ಷೆ ಮಾಡಿಸಿ ಔಷಧಿ ಪಡೆಯಬೇಕು. ಡೆಂಗ್ಯೂ ಜ್ವರದ ಪ್ರಕರಣಗಳು ಪತ್ತೆಯಾದ ಪರಿಸರದಲ್ಲಿ ಸಾರ್ವಜನಿಕರು ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟು ಯಾವುದೇ ರೋಗಗಳು ಹರಡದಂತೆ ನಿಯಂತ್ರಿಸಲು ಅಗತ್ಯ ಸಹಕಾರವನ್ನು ನೀಡುವಂತೆ ಬಂಟ್ವಾಳ ಪುರಸಭೆಯ ಮುಖ್ಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!