February 3, 2026

ಬಜ್ಪೆ: ವಿದ್ಯುತ್‌ ಕಂಬಕ್ಕೆ ಆಟೊ ರಿಕ್ಷಾ ಡಿಕ್ಕಿ: ಯುವತಿ ಸ್ಥಳದಲ್ಲಿಯೇ ಮೃತ್ಯು, ಮೂವರಿಗೆ ಗಾಯ

0
image_editor_output_image1842349424-1695014836290.jpg

ಮಂಗಳೂರು: ಆಟೋರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರಣ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ.

ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಮೃತ ಯುವತಿ. ಇನ್ನು ಗಾಯಾಳುಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!