March 22, 2026

ಚೈತ್ರಾ ಕುಂದಾಪುರ ಬಂಧನ: 101 ಈಡುಗಾಗಿ ಹೊಡೆದು ಸಂಭ್ರಮಿಸಿದ ಗ್ರಾಮಸ್ಥರು

0
image_editor_output_image1890036509-1695019909508.jpg

ಚಿಕ್ಕಮಗಳೂರು: ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ, ಸಿಸಿಬಿ ಪೊಲೀಸರ ಅತಿಥಿಯಾಗಿರುವುದಕ್ಕೆ ಜಿಲ್ಲೆಯ ಕೊಪ್ಪ ತಾಲೂಕಿನ ಶಾನುವಳ್ಳಿ ಗ್ರಾಮ ಪಂಚಾಯಿತಿಯ ಮಾವಿನಕಟ್ಟೆ ಗ್ರಾಮದ ಜನರು ಆನೆ ವಿಘ್ನೇಶ್ವರ ಹಾಗೂ ಬ್ರಹ್ಮ ಜಟಿಗೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, 101 ಈಡುಗಾಗಿ ಹೊಡೆದು ಸಂಭ್ರಮಿಸಿದ್ದಾರೆ.

ಕಳೆದ ಅಕ್ಟೋಬರ್ 4 ರಂದು ಮಾವಿನಕಟ್ಟೆ ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಹಿಂದೂಗಳ ಮನಸ್ಸಿಗೆ ನೋವಾಗುವಂತಹ ಭಾಷಣ ಮಾಡಿದ್ದ ಚೈತ್ರಾ ಕುಂದಾಪುರ ಭಾಷಣಕ್ಕೆ ಸ್ಥಳೀಯರೇ ಬೇಸರ ವ್ಯಕ್ತಪಡಿಸಿದ್ದರು.

ಸಹಬಾಳ್ವೆಯಿಂದಿದ್ದ ಗ್ರಾಮಕ್ಕೆ ಕಾಲಿಟ್ಟು ಶಾಂತಿ ಕದಡುವ ಕೆಲಸ ಮಾಡಿದ್ದರು. ಹಿಂದೂಗಳ ವಿರುದ್ಧ ಹಿಂದೂಗಳನ್ನೇ ಎತ್ತಿಕಟ್ಟುವ ಪ್ರಚೋದನಾಕಾರಿ ಭಾಷಣ ಮಾಡಿದ್ದರು ಎಂದು ಆರೋಪಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!