February 4, 2026

ಬಂಟ್ವಾಳ: ಮನೆಗೆ ನುಗ್ಗಿ 15 ಲಕ್ಷ ರೂ. ಮೌಲ್ಯದ ಸೊತ್ತು ಕಳವು: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ
 

0
IMG-20230918-WA0004.jpg


ಬಂಟ್ವಾಳ: ಬಂಟ್ವಾಳ ನಗರ ಠಾಣೆಯ ಪೋಲೀಸರು ಭರ್ಜರಿ ಬೇಟೆಯಾಡಿ, ಹಗಲು ವೇಳೆ ಮನೆಗೆ ನುಗ್ಗಿ ಕಳವು ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಕಸಬಾ ಬೇಂಗ್ರೆ ನಿವಾಸಿ ಮಹಮ್ಮದ್ ಆಯುಬು ಅವರ ಮಗ ಫರಾಜ್(27) ಹಾಗೂ ಸುರತ್ಕಲ್ ತಾಲೂಕು ಚೊಕ್ಕಬೆಟ್ಟು, ಕೃಷ್ಣಪುರ 8- 36 ಸೈಟ್ ನಂ 37, 4ನೇ ಬ್ಲಾಕ್ ನಿವಾಸಿ ಅಬ್ಬಾಸ್ ಅವರ ಮಗ ತೌಸಿಫ್ ಅಹಮ್ಮದ್ (34) ಬಂಧಿತರು.

ಬಂಧಿತರಿಂದ ಒಟ್ಟು ರೂ. 12,23,000/- ಮೌಲ್ಯದ 223ಗ್ರಾಂ ಚಿನ್ನಾಭರಣ ಮತ್ತು ರೂ 3000/- ಮೌಲ್ಯದ ಬೆಳ್ಳಿ ವಸ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 3,30,000/- ಮೌಲ್ಯದ ಮಹೀಂದ್ರ ಕೈಲೋ ಕಾರು ಮತ್ತು ಮೋಟಾರ್ ಸೈಕಲ್ ಸೇರಿದಂತೆ ಒಟ್ಟು ರೂ 1556000/- ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ದೇವಮಾತ ಕಾಂಪ್ಲೆಕ್ಸ್ ನಲ್ಲಿ ವಾಸವಿರುವ ಮೈಕಲ್ ಡಿಸೋಜಾ ಎಂಬವರ ಮನೆಯ ಎದುರಿನ ಬಾಗಿಲಿನ ಡೋರನ್ನು ಸೆ. 01 ರಂದು ಕಳ್ಳರು ಮುರಿದು ಒಳ ಪ್ರವೇಶಿಸಿ ಮನೆಯ ಕೋಣೆಯೊಳಗಿದ್ದ ಗೋಡ್ರೆಜ್ ಗಳ ಬಾಗಿಲುಗಳನ್ನು ಮುರಿದು ಒಟ್ಟು 115 ಗ್ರಾಂ ತೂಕದ ಸುಮಾರು 5,36,000/- ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಸುಮಾರು 3,000/- ರೂಪಾಯಿ ಮೌಲ್ಯದ ಬೆಳ್ಳಿಯ ಸಾಮಾಗ್ರಿಯನ್ನು ಕಳವು ಮಾಡಿದ ಘಟನೆ ನಡೆದಿತ್ತು.

ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಕಳವಾದ ಸೊತ್ತುಗಳನ್ನು ಪತ್ತೆಮಾಡಿಕೊಡಬೇಕಾಗಿ ಕೋರಿ ಮೈಕಲ್ ಡಿಸೋಜಾ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್ ಅವರ ನಿರ್ದೇಶನದಂತೆ ಇನ್ಸ್ ಪೆಕ್ಟರ್ ನಾಗರಾಜ್ ನೇತೃತ್ವದಲ್ಲಿ ಎಸ್.ಐ.ರಾಮಕೃಷ್ಣ ಅವರ ತಂಡವನ್ನು ರಚಿಸಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದರು.

Leave a Reply

Your email address will not be published. Required fields are marked *

error: Content is protected !!