ಖ್ಯಾತ ನಟ ವಿಜಯ್ ಆ್ಯಂಟೋನಿ ಪುತ್ರಿ ಆತ್ಮಹತ್ಯೆ
ಚೆನ್ನೈ: ಖ್ಯಾತ ನಟ ಹಾಗೂ ಸಂಗೀತ ನಿರ್ದೇಶಕ ವಿಜಯ್ ಆ್ಯಂಟೋನಿ ಅವರ ಪುತ್ರಿ ಮೀರಾ ಮಂಗಳವಾರ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
12 ನೇ ತರಗತಿಯಲ್ಲಿ ಓದುತ್ತಿದ್ದ ಮೀರಾ ಮಂಗಳವಾರ ಮುಂಜಾನೆ ಚೆನ್ನೈನ ತೆನಾಂಪೇಟೆಯಲ್ಲಿರುವ ತನ್ನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಮನೆ ಮಂದಿ ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೋತ್ತಿಗಾಗಲೇ ಮೀರಾ ಕೊನೆಯುಸಿರೆಳೆದಿದ್ದಾಳೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.





