September 26, 2026

ಕಾಸರಗೋಡು: ರಸ್ತೆಯ ಹೊಂಡಕ್ಕೆಬಿದ್ದು ಸ್ಕೂಟರ್ ಪಲ್ಟಿ: ಉದ್ಯಮಿ ಮಹೇಶ್ಚಂದ್ರ ಬಾಳಿಗಾರ ಪುತ್ರಿ ಮೃತ್ಯು

0
image_editor_output_image-848012496-1695103707094.jpg

ಕಾಸರಗೋಡು: ರಸ್ತೆಯ ಹೊಂಡದಲ್ಲಿ ಸಿಲುಕಿದ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಕಣ್ಣೂರು ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ, ಕಣ್ಣೂರು ಸೈಂಟ್ ಮೈಕಲ್ ಶಾಲಾ ಸಮೀಪದ ಮಹೇಶ್ಚಂದ್ರ ಬಾಳಿಗಾರವರ ಪುತ್ರಿ ಶಿವಾನಿ ಬಾಳಿಗಾ (20) ಮೃತ ಪಟ್ಟ ವಿದ್ಯಾರ್ಥಿನಿ.

 

ಮಣಿಪಾಲ ವಿಶ್ವ ವಿದ್ಯಾನಿಲಯದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದಳು.

ರವಿವಾರ ರಾತ್ರಿ ಏಳು ಗಂಟೆ ಸುಮಾರಿಗೆ ಕಾಸರಗೋಡು ಚಂದ್ರಗಿರಿ ರಸ್ತೆಯ ಪಿಲಿಕುಂಜೆ ಎಂಬಲ್ಲಿ ಅಪಘಾತ ನಡೆದಿತ್ತು.

ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ರಸ್ತೆಯ ಹೊಂಡಕ್ಕೆ ಬಿದ್ದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಶಿವಾನಿ ಗಂಭೀರ ಗಾಯಾಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಸಂಜೆ ಮೃತ ಪಟ್ಟಿದ್ದಾರೆ. ಅಪಘಾತದ ಕುರಿತಂತೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!