ತುಂಬೆ: ಕಾರು ಢಿಕ್ಕಿ ಡಿವೈಡರ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನಿಗೆ ಗಾಯ
ಬಂಟ್ವಾಳ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಎಂಬಲ್ಲಿ ಡಿವೈಡರ್ ಬಳಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಹಾವೇರಿ ಮೂಲದ ನಾಗರಾಜ್ ಲಮಾಣಿ ಎಂಬಾತ ಗಾಯಗೊಂಡ ಘಟನೆ ನಡೆದಿದೆ.
ಕಾರು ಮಂಗಳೂರು ಕಡೆಯಿಂದ ಬರುತ್ತಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್ ಮೇಲೆ ಹತ್ತಿದೆ.
ಈ ಸಂದರ್ಭದಲ್ಲಿ ಡಿವೈಡರ್ ನಲ್ಲಿ ಹುಲ್ಲು ತೆಗೆಯುವ ಕೆಲಸ ಮಾಡುತ್ತಿದ್ದ ಕಾರ್ಮಿಕನಿಗೆ ಡಿಕ್ಕಿ ಹೊಡೆದಿದೆ. ಅಲ್ಲದೆ ಕಾರು ವಿರುದ್ಧ ರಸ್ತೆಗೆ ಮುನ್ನುಗ್ಗಿದೆ.
ಅದೇ ಸಮಯದಲ್ಲಿ ಮುಂಭಾಗದಿಂದ ಬರುತ್ತಿದ್ದ ಕಾರು ಮತ್ತು ಬೈಕ್ ಎರಡು ವಾಹನಗಳ ನಡುವೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಬೈಕ್ ಜಖಂಗೊಂಡಿದೆ.





