ಬಂಟ್ವಾಳ: ಇಲೆಕ್ಟ್ರಾನಿಕ್ ಅಂಗಡಿ ಬೆಂಕಿಗಾಹುತಿ
ಬಂಟ್ವಾಳ: ಆಕಸ್ಮಿಕವಾಗಿ ಬೆಂಕಿ ತಗುಲಿ ಇಲೆಕ್ಟ್ರಾನಿಕ್ ಅಂಗಡಿಯೊಂದು ಬಾಗಶ: ಬೆಂಕಿಗಾಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆ ನಡೆದಿದೆ.
ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಸೊತ್ತುಗಳು ಸುಟ್ಟುಹೋಗಿವೆ.
ಬಳಿಕ ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸೇರಿ ಬೆಂಕಿ ನಂದಿಸುವಲ್ಲಿ ಸಫಲರಾದರು.





