KSRTC ಬಸ್ ಪಲ್ಟಿ: ಶಾಲಾ ಮಕ್ಕಳು ಸೇರಿ 40ಕ್ಕೂ ಅಧಿಕ ಮಂದಿಗೆ ಗಾಯ
ಸಂಡೂರು: ತಾಲ್ಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟೀನ್ ಕಂಬ ಹಾಗೂ ಉತ್ತರ ಮಲೈ ಮಧ್ಯೆ ಕೆಎಸ್‌ಆರ್‌ಟಿಸಿ ಬಸ್ ಬುಧವಾರ ನೆಲಕ್ಕುರುಳಿದೆ.
ಅಪಘಾತದಲ್ಲಿ ಶಾಲಾ ಮಕ್ಕಳು ಸೇರಿದಂತೆ ನಲವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀವಾಗಿ ಗಾಯಗೊಂಡಿರುವ ಹತ್ತು ಮಕ್ಕಳನ್ನು ಆ್ಯಂಬ್ಯುಲೆನ್ಸ್ ಮೂಲಕ ಬಳ್ಳಾರಿಯ ವಿಮ್ಸ್‌ಗೆ ಕರೆದೊಯ್ಯಲಾಗಿದೆ. ಅಪಘಾತದಲ್ಲಿ ಬಸ್ ಕಂಡಕ್ಟರ್ ಕೈ ಮುರಿದಿದೆ.





