ಶಿಲ್ಪಾ (28) ಮೃತ ಮಹಿಳೆ. ಈಕೆ ಮನೆಯ ಎರಡನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮೃತಳ ಪತಿ ಶರತ್ ಹಾಗೂ ಅತ್ತೆ-ಮಾವ ಸೇರಿ ಆಕೆಯನ್ನು ಹತ್ಯೆ ಮಾಡಿದ್ದಾರೆ ಎಂದು ಶಿಲ್ಪಾ ಸಂಬಂಧಿಕರು ಆರೋಪಿಸಿದ್ದಾರೆ.
ಘಟನೆಯ ಬಳಿಕ ಶಿಲ್ಪಾ ಪತಿ ಶರತ್ ಪರಾರಿಯಾಗಿದ್ದಾನೆ. ಪರಾರಿಯಾಗಿರುವ ಪತಿ ಬರುವವರೆಗೂ ಆಕೆಯ ಮೃತದೇಹ ಎತ್ತಲು ಬಿಡಲ್ಲ ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.