ಕಲ್ಲಡ್ಕಅನುಗ್ರಹ ಮಹಿಳಾ ಕಾಲೇಜಿನಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಸ್ಪರ್ಧಾ ಪ್ರದರ್ಶನ: “BRAINIACS-2023″ಗೆ ಚಾಲನೆ
ವಿಟ್ಲ: ಕಲ್ಲಡ್ಕ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಸ್ಪರ್ಧಾ ಪ್ರದರ್ಶನ, “BRAINIACS-2023″ಗೆ ಚಾಲನೆ ನೀಡಲಾಯಿತು.
ಸ್ಪರ್ಧಾ ಉದ್ಘಾಟನಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷೆ ಗೀತಾಕುಮಾರಿ ಎನ್. ವಿ. ಉದ್ಘಾಟಿಸಿ ಮಾತನಾಡಿದರು.
ಆಡಳಿತ ಮಂಡಳಿಯ ಅಧ್ಯಕ್ಷ ಯಾಸೀನ್ ಬೇಗ್ ರವರು ಅನುಗ್ರಹ ಮಹಿಳಾ ಕಾಲೇಜುಗಳ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು.

ಇಂಗ್ಲೀಷ್ ಉಪನ್ಯಾಸಕಿ ಅಬಿದ ಬಿ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಪ್ರಾಂಶುಪಾಲರು ಸ್ವಾಗತಿಸಿದರು.
ವಿಜ್ಞಾನ ಮಾದರಿ, ಚರ್ಚಾ ಸ್ಪರ್ಧೆ, ಕಸದಿಂದ ರಸ, ರಸಪ್ರಶ್ನೆ, ಆಶುಭಾಷಣ ಹಾಗೂ ಕೆಮ್ ರಂಗೋಲಿ ಮುಂತಾದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.







