February 4, 2026

ಮೊರಾರ್ಜಿ ವಸತಿ ಶಾಲೆಯ ನೀರಿನ ತೊಟ್ಟಿಯ ಗೋಡೆ ಕುಸಿದು ವಿದ್ಯಾರ್ಥಿ ಮೃತ್ಯು

0
IMG-20230921-WA0041.jpg

ರಾಮನಗರ: ಮೊರಾರ್ಜಿ ವಸತಿ ಶಾಲೆಯ ನೀರಿನ ತೊಟ್ಟಿಯ ಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಗುರುವಾರ ರಾಮನಗರದಲ್ಲಿ ನಡೆದಿದೆ.

ರಾಮನಗರದ ಹೊಸೂರು ಗೊಲ್ಲಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಕೌಶಿಕ್ ಗೌಡ (12)‌ ಮೃತ ವಿದ್ಯಾರ್ಥಿಯಾಗಿದ್ದಾನೆ. ನೀರಿನ ಪ್ರಮಾಣ‌ ತಡೆಯಲಾಗದೇ ಗೋಡೆ ಕುಸಿದಿದೆ ಎಂದು ಹೇಳಲಾಗಿದೆ.

ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಳಿಗ್ಗೆ 8.30ರ ಸುಮಾರಿಗೆ ತೊಟ್ಟಿ ಬಳಿ ಕೌಶಿಕ್ ಸೇರಿದಂತೆ ಇಬ್ಬರು ವಿದ್ಯಾರ್ಥಿಗಳು ಮುಖ‌ ತೊಳೆಯುತ್ತಿದ್ದರು. ಆಗ, ಐದು ಅಡಿ ಎತ್ತರವಿರುವ ತೊಟ್ಟಿಯ ಶಿಥಿಲಗೊಂಡ ಗೋಡೆ ವಿದ್ಯಾರ್ಥಿಗಳ ಮೇಲೆ ಉರುಳಿದೆ. ಗೋಡೆಯ ಅವಶೇಷಗಳಡಿ ಸಿಲುಕಿದ್ದ ತೀವ್ರವಾಗಿ ಗಾಯಗೊಂಡಿದ್ದ ಕೌಶಿಕ್, ದಯಾನಂದ ಸಾಗರ್ ಸಾಗರ್ ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾನೆ. ಮೃತ ವಿದ್ಯಾರ್ಥಿಯ ಶವವನ್ನ ದಯಾನಂದ ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!