ಮನಮೋಹನ್ (31) ನಿಖಿಲ್ (25) ಮೃತ ದುರ್ದೈವಿಗಳು. ಮುಂಜಾನೆ 3:30ರ ಸಮಯದಲ್ಲಿ ಘಟನೆ ನಡೆದಿದೆ.
ಅತಿವೇಗವಾಗಿ ಬಿಎಂಡಬ್ಲೂ ಬೈಕ್ ಚಾಲನೆ ಮಾಡುತ್ತಿದ್ದ ಯುವಕರು ಯಶವಂತಪುರದಿಂದ ಆರ್‌ಎಂಸಿ ಯಾರ್ಡ್ ರೋಡ್ ಕಡೆಗೆ ಡ್ರೈವ್ ಮಾಡಿಕೊಂಡು ಬರುತ್ತಿದ್ದರು.
ಮದ್ಯ ಸೇವಿಸಿ ಬೈಕ್ ಚಲಾಯಿಸುತ್ತಿದ್ದದ್ದು ಮಾತ್ರವಲ್ಲದೇ ಹೆಲ್ಮೆಟ್ ಸಹ ಧರಿಸಿರಲಿಲ್ಲ. ಕೊನೆಗೆ ಬೈಕ್ ನಿಯಂತ್ರಣಕ್ಕೆ ಸಿಗದೇ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರು ಬೈಕ್‌ನಿಂದ ಕೆಳಗೆ ಬಿದ್ದು ತೀವ್ರ ರಕ್ತಸ್ರಾವವಾಗಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.