April 26, 2025

ಅನುಗ್ರಹ ಮಹಿಳಾ ಕಾಲೇಜಿನಲ್ಲಿ ನಡೆದ BRAINIACS- 2023: ವಿಜೇತರಿಗೆ ಬಹುಮಾನ ವಿತರಣೆ

0

ವಿಟ್ಲ: ಕಲ್ಲಡ್ಕ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಅಂತರ್ ಶಾಲಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಸ್ಪರ್ಧೆಯಲ್ಲಿ ಅನೇಕ ಶಾಲೆಗಳು ಸಕ್ರಿಯವಾಗಿ ಭಾಗವಹಿಸಿದ್ದು, ಬಹುಮಾನ ವಿಜೇತ ಶಾಲೆಗಳು ಈ ರೀತಿಯಾಗಿದೆ.

 

 

ಯಿಷಾ ಆಂಗ್ಲ ಮಾಧ್ಯಮ ಶಾಲೆ ಆತೂರು, ರಸಪ್ರಶ್ನೆ ಪ್ರಥಮ ಸ್ಥಾನ, ವಿಜ್ಞಾನ ಮಾದರಿ ಪ್ರಥಮ ಸ್ಥಾನ, ಚರ್ಚಾಸ್ಪರ್ಧೆ ಪ್ರಥಮ ಸ್ಥಾನ, ರಂಗೋಲಿ ದ್ವಿತೀಯ ಸ್ಥಾನ, ಆಶುಭಾಷಣ ದ್ವಿತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡರು.

SLNP ಆಂಗ್ಲ ಮಾಧ್ಯಮ ಶಾಲೆ ಪಾಣೆ ಮಂಗಳೂರು, ವಿಜ್ಞಾನ ಮಾದರಿ ದ್ವಿತೀಯ ಸ್ಥಾನ, ಕಸದಿಂದ ರಸ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು
ತಮ್ಮದಾಗಿಸಿಕೊಂಡರು. ಸರಕಾರಿ ಪ್ರೌಢಶಾಲೆ ಸುರಿಬೈಲ್ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಜೆಮ್ ಆಂಗ್ಲ ಮಾಧ್ಯಮ ಶಾಲೆ ರಸಪ್ರಶ್ನೆಯಲ್ಲಿ ದ್ವಿತೀಯ ಸ್ಥಾನ, ಕರ್ನಾಟಕ ಪ್ರೌಢಶಾಲೆ ಮಾಣಿ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ತೌಹೀದ್ ಆಂಗ್ಲ ಮಾಧ್ಯಮ ಶಾಲೆ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ಸರಕಾರಿ ಪ್ರೌಢಶಾಲೆ ಕೇಪು ಕಸದಿಂದ ರಸ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ.

ವಿಜೇತ ಶಾಲೆಗಳಿಗೆ ಸ್ಮರಣಿಕೆ ಮತ್ತು ನಗದು ಬಹುಮಾನವನ್ನು ನೀಡಿ ಪುರಸ್ಕರಿಸಲಾಯಿತು. ಭಾಗವಹಿಸಿದ್ದ ಎಲ್ಲಾ ಶಾಲೆಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಆಗಮಿಸಿದ ಶಾಲೆಗಳ ಸಂಯೋಜಕರು ಮತ್ತು ವಿದ್ಯಾರ್ಥಿನಿಯರು ಕಾರ್ಯಕ್ರಮದ ಬಗ್ಗೆ ತಮ್ಮ ಅನಿಸಿಕೆಯಲ್ಲಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಅನುಗ್ರಹ ಕಾಲೇಜಿನ ಸಂಚಾಲಕರಾದ ಶ್ರೀಯುತ ಅಮಾನುಲ್ಲಾ ಖಾನ್ ಇವರು ಬಹುಮಾನ ಪಡೆದ ಮತ್ತು ಭಾಗವಹಿಸಿದ ಎಲ್ಲಾ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ತಮ್ಮ ಅತಿಥಿ ಭಾಷಣದಲ್ಲಿ ಶುಭಾಶಯವನ್ನು ತಿಳಿಸಿ, ಸರ್ವರಿಗೂ ವಂದಿಸಿದರು.

ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಯಾದ ಶ್ರೀಯುತ ಶಾಹುಲ್ ಹಮೀದ್, ಖಜಾಂಚಿಯಾಗಿರುವ ಶ್ರೀಯುತ ಹೈದರ್ ಅಲಿ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಹೇಮಲತ ಬಿ ಡಿ, ಸಲಹಾ ಸಮಿತಿಯ ಕಾರ್ಯದರ್ಶಿಯಾಗಿರುವ ಶ್ರೀಮತಿ ಮಮಿತಾ ಎಸ್ ರೈ ಹಾಗೂ ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಪ್ರಜ್ಞಾ ಎಂ ಉಪಸ್ಥಿತರಿದ್ದು ವಿಜೇತರಿಗೆ ಬಹುಮಾನವನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಸಲಹಾ ಸಮಿತಿಯ ಸದಸ್ಯರು ಬೋಧಕ- ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿಯಾಗಿರುವ ಕುಮಾರಿ ಶ್ವೇತಾ ಎಸ್ ರವರು ಸ್ವಾಗತಿಸಿ, ನಿರೂಪಿಸಿದರು. ಆಗಮಿಸಿದ ಸರ್ವರಿಗೂ ಉಪಹಾರ ಮತ್ತು ಭೋಜನದ ವ್ಯವಸ್ಥೆಯನ್ನು ಮಾಡಲಾಯಿತು.

Leave a Reply

Your email address will not be published. Required fields are marked *

error: Content is protected !!