April 22, 2025

ಧರ್ಮಸ್ಥಳದಲ್ಲಿ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾರ್ಟ್ ಮೆಂಟ್‍ನಿಂದ ಜಿಗಿದು ಸಾವು

0

ಬೆಂಗಳೂರು: ಈ ಹಿಂದೆ ಧರ್ಮಸ್ಥಳದಲ್ಲಿ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾಟ್ಮೆರ್ಂಟ್‍ನಿಂದ ಜಿಗಿದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ವಿಜಯಲಕ್ಷ್ಮಿ (17) ವರ್ಷ ಮೃತ ಯುವತಿ. ಈ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಖಿನ್ನತೆಗೊಳಗಾಗಿ ವಿದ್ಯಾರ್ಥಿನಿ ಇಲ್ಲಿನ ಬ್ರೈಡ್ ಅಪಾರ್ಟ್ ಮೆಂಟ್ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಆತ್ಮಹತ್ಯೆ ಮಾಡಿಕೊಳ್ಳಲು ಧರ್ಮಸ್ಥಳಕ್ಕೆ ಹೋಗಿದ್ದಳು. ಅಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಸ್ಥಳೀಯ ರಬ್ಬರು ರಕ್ಷಣೆ ಮಾಡಿ ಬುದ್ಧಿ ಹೇಳಿ ಕಳುಹಿಸಿದ್ದರು.

 

 

ಪೋಷಕರಿಗೆ ಫೋನ್ ಮಾಡಿ ತಿಳಿ ಹೇಳಿ ಯುವತಿ ಯನ್ನು ವಾಪಸ್ ಕಳುಹಿಸಿದ್ರು. ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸ್ ಬಂದು ಅಪಾರ್ಟ್ ಮೆಂಟ್ ನ ಟೆರೇಸ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Leave a Reply

Your email address will not be published. Required fields are marked *

error: Content is protected !!