September 26, 2026

ಬಂಟ್ವಾಳ: ಕಾರು-ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕ ಮೃತ್ಯು

0
image_editor_output_image2120785604-1695455639836.jpg

ಬಂಟ್ವಾಳ: ಕಾರು ಡಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ

ಕೆಂಪು ಗುಡ್ಡೆ ನಿವಾಸಿ ವಿನಾಯಕ ಪೈ.ಮೃತಪಟ್ಟ ದುರ್ದೈವಿ.

 

ವಿನಾಯಕ ಪೈ ಅವರ ಮನೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಬೆಳಿಗ್ಗೆ ಹೊತ್ತಿನ ಉಪಹಾರ ತರಲೆಂದು ಅವರು ವಗ್ಗದ ಹೊಟೇಲ್ ಒಂದಕ್ಕೆ ಹೋಗುವ ವೇಳೆ ಈ ಅಪಘಾತ ನಡೆದಿದೆ ಎನ್ನಲಾಗಿದೆ.
ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವ್ಯಾಗನಾರ್ ಕಾರು ರಿಕ್ಷಾಕ್ಕೆ ಡಿಕ್ಕಿಯಾಗಿದೆ.
ಗಂಭೀರವಾಗಿ ಗಾಯಗೊಂಡ ವಿನಾಯಕ ಪೈ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆ ಸಾಗಿಸುವ ದಾರಿ ಮಧ್ಯದಲ್ಲಿ ಅವರು ಅಸುನೀಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮೆಲ್ಕಾರ್ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು,ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!