March 15, 2026

ಬೆಳ್ತಂಗಡಿ: ವಿಷ ಸೇವಿಸಿ ಯುವಕ ಆತ್ಮಹತ್ಯೆ

0
image_editor_output_image-92335337-1695463426059.jpg

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸೋಣಂದೂರಿನಲ್ಲಿ ನಡೆದಿದೆ.

ಮೃತ ಯುವಕನನ್ನು ಸೋಣಂದೂರು ಮುಂಡಾಡಿ ನಿವಾಸಿ ಪ್ರಶಾಂತ್‌ ಎನ್ನಲಾಗಿದೆ.

ಸೆ.18ರಂದು ರಾತ್ರಿ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಮನೆಯವರು ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಘಟನೆಯ ಬಗ್ಗೆ ಮೃತನ ಸಂಬಂಧಿಯಾಗಿರುವ ಪ್ರತೀಕ್‌ ನೀಡಿರುವ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!