ಮಂಗಳೂರು: ಕಾರು ಮತ್ತು ಬೈಕ್ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಬಿಕರ್ನಕಟ್ಟೆಯಲ್ಲಿ ಸಂಭವಿಸಿದೆ.
ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ.
ಬೈಕ್ ಸವಾರ ಗಾಯಗೊಂಡಿದ್ದು, ಆತನ ವಿವರ ಇನ್ನಷ್ಟೇ ಲಭಿಸಬೇಕಾಗಿದೆ.
ಈ ಅಪಘಾತದಿಂದಾಗಿ ಬಿಕರ್ನಕಟ್ಟೆಯಲ್ಲಿ ಕೆಲ ಹೊತ್ತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

