September 26, 2026

ಉಳ್ಳಾಲ: ಸ್ಕೂಟರ್ ನಿಂದ ಬಿದ್ದು ಮಹಿಳೆ ಸಾವು

0
image_editor_output_image1869074956-1695629264231.jpg

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು‌ ಬಳಿ ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ‌ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಗುರುತಿಸಲಾಗಿದೆ.
ಮೂಲತ: ಬಂಟ್ವಾಳ ನೆಟ್ಲದವರಾಗಿದ್ದ ಇವರು ಭಾನುವಾರ ಮಧೂರಿನಿಂದ ಕುಟುಂಬದ ಮನೆ ಪಿಲಾರು ಅರಮನೆಯಲ್ಲಿ‌ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಸಂಜೆ ಕಾಸರಗೋಡು ಕಡೆ ತೆರಳಲು ಸಹೋದರನ ಬೈಕ್ ನಲ್ಲಿ ತೊಕ್ಕೊಟ್ಟು ಜಂಕ್ಷನ್ ಗೆ ತೆರಳಿದವರು, ಜಪ್ಪಿನ ಮೊಗರು ಬಳಿಯ ಸಂಬಂಧಿಕರ ಮನೆಗೆ ತೆರಳಿ ವಾಪಾಸ್ ತೊಕ್ಕೊಟ್ಟು ಕಡೆ ಬರುವಾಗ ಈ ಅವಘಡ ಸಂಭವಿಸಿದೆ‌

 

Leave a Reply

Your email address will not be published. Required fields are marked *

You may have missed

error: Content is protected !!