March 15, 2026

ಕಡಬ: ಕೆಎಸ್ಸಾರ್ಟಿಸಿ ಬಸ್ಸಿನಿಂದ ಬಿದ್ದು ಕುದ್ಕೋಳಿ ನಿವಾಸಿ ಮೃತ್ಯು

0
image_editor_output_image851982854-1695629571775.jpg

ಕಡಬ: ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟು, ಘಟನೆ ಭಾನುವಾರ ಸಂಜೆ ಕಡಬದಲ್ಲಿ ನಡೆದಿದೆ.

ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ ನಿವಾಸಿ ಅಚ್ಚುತ್ತ ಗೌಡ (63) ಮೃತರು.

ಮೃತರು ಭಾನುವಾರ ಸಂಜೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಹೊರಟಿದ್ದ ವೇಳೆ ಅಂಚೆ ಕಚೇರಿಯ ಸಮೀಪದ ತಿರುವಿನಲ್ಲಿ ಆಯತಪ್ಪಿ ಅಚ್ಚುತ್ತ ಗೌಡ ಹಾಗೂ ಬಲ್ಯ ನಿವಾಸಿ ಚಂದ್ರಶೇಖರ ಎಂಬವರು ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟಿದ್ದಾರೆ.

ಗಂಭೀರ ಗಾಯಗೊಂಡ ಅಚ್ಚುತ್ತ ಗೌಡರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಹಾದಿ ಮಧ್ಯೆ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!