March 15, 2026

ಬಂಟ್ವಾಳ, ವಿಟ್ಲ, ಉಪ್ಪಿನಂಗಡಿ, ಬೆಳ್ತಂಗಡಿ, ಕೊಣಾಜೆಯಲ್ಲಿ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ‌ ಬಂಧನ

0
image_editor_output_image542296647-1695636669902.jpg

ಬಂಟ್ವಾಳ: ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಧಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ,ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ಕೋರ್ಟ್ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಮಂಗಳೂರು ತಾಲೂಕಿನ ಸುರತ್ಕಲ್ ಕೃಷ್ಣಾಪುರ ಚೋಕ್ಯಬೆಟ್ಟು ನಿವಾಸಿ ಮಹಮ್ಮದ್ ಶಾಫಿ ಬಂಧಿತ ಆರೋಪಿ.

ಬಂಟ್ವಾಳ ನಗರ ಪೊಲೀಸ್ ಠಾಣೆ, ವಿಟ್ಲ ಪೋಲಿಸ್ ಠಾಣೆ, ಉಪ್ಪಿನಂಗಡಿ, ಬೆಳ್ತಂಗಡಿ ಹಾಗೂ ಕೊಣಾಜೆ ಪೋಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಪ್ರಕರಣ ದಾಖಲಾಗಿದ್ದು,ಈತ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!