March 15, 2026

ಕಡಬ: ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಘೋಷಣೆ ಕೂಗಿದ ಪ್ರಕರಣ: ಆರೋಪಿ ಪೊಲೀಸರ ವಶಕ್ಕೆ

0
IMG-20230925-WA0091.jpg

ಕಡಬ: ರಾತ್ರಿ ವೇಳೆ ಬೈಕ್ ನಲ್ಲಿ ಆಗಮಿಸಿದ ಕಿಡಿಗೇಡಿಗಳಿಬ್ಬರು ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಂ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್ (25) ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಕೈಕಂಬ ನಡ್ತೋಟ ನಿವಾಸಿ ಸಚಿನ್ ಪರಾರಿಯಾಗಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ.

ರವಿವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಕಡಬ ಠಾಣಾ ವ್ಯಾಪ್ತಿಯ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆ ಬೈಕಿನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಮಸೀದಿಯ ವರಾಂಡದಲ್ಲಿ ಬೈಕನ್ನು ಹಿಂತಿರುಗಿಸಿ ತೆರಳಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಜೈಶ್ರೀರಾಂ ಘೋಷಣೆ ಕೂಗಿದ್ದಾರೆ ಎನ್ನಲಾಗಿದ್ದು, ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ಕಂಡು ತಕ್ಷಣವೇ ಹಿಂತಿರುಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!