September 26, 2026

ಕಾರು ಲಾರಿಗೆ ಢಿಕ್ಕಿ: ಮೂವರು ಮೃತ್ಯು

0
image_editor_output_image10911084-1695705150266.jpg

ತುಮಕೂರು: ಕಾರು ಲಾರಿಗೆ ಡಿಕ್ಕಿಯಾಗಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ.

ಆಕಾಶ್ (20) ಹೇಮಂತ್ (28) ಶಿವಕುಮಾರ್ ಮೃತ ದುರ್ದೈವಿಗಳು. ಘಟನೆಯಲ್ಲಿ ಉಜ್ವಲ್ ಕೃಷ್ಣ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಾರು ಬೆಂಗಳೂರಿನಿಂದ ಪಾವಗಡ ಕಡೆ ತೆರಳುತ್ತಿದ್ದರೆ, ಲಾರಿ ಪಾವಗಡದಿಂದ ತುಮಕೂರು ಕಡೆ ಬರುತ್ತಿತ್ತು.

 

ಈ ವೇಳೆ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಪಾವಗಡ ಮೂಲದವರು ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!