September 26, 2026

ಮಂಗಳೂರು: ರಿಕ್ಷಾಕ್ಕೆ ಆಂಬುಲೆನ್ಸ್ ಡಿಕ್ಕಿ: ಆಟೋ ಚಾಲಕ, ಮಗುವಿಗೆ ಗಾಯ

0
IMG-20230926-WA0044.jpg

ಮಂಗಳೂರು: ರೋಗಿಯೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದ 108 ಆಂಬ್ಯುಲೆನ್ಸ್ ಟೈಲ್ಸ್ ಸಾಗಿಸುತ್ತಿದ್ದ ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮತ್ತು ಮಗು ಗಾಯಗೊಂಡ ಘಟನೆ ಮಂಗಳೂರಿನ ಪಡೀಲ್ ನಲ್ಲಿ ನಡೆದಿದೆ.

ಆಟೋ ರಿಕ್ಷಾದಲ್ಲಿ ಮೂವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಗಾಯಗೊಂಡ ಆಟೋ ರಿಕ್ಷಾ ಚಾಲಕ ಹಾಗೂ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಆಂಬ್ಯುಲೆನ್ಸ್ ಹಿಂದಿನಿಂದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಆಟೋ ರಿಕ್ಷಾದಲ್ಲಿದ್ದ ಟೈಲ್ಸ್ ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಇನ್ನು ಅಪಘಾತದ ಪರಿಣಾಮ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!