June 24, 2026

ಮೂಡುಬಿದಿರೆ: ಗಾಂಜಾ ಮಾರಾಟ, ಮೂವರ ಬಂಧನ

0
image_editor_output_image156603223-1695883895389.jpg

ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ಬುಧವಾರ ವಶಕ್ಕೆ ಪಡೆದಿದೆ.

ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್ (22), ಫರ್ಹಾನ್ ಖಾನ್ (18) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತ ಆರೋಪಿಗಳು.

ಮೂವರು ಆರೋಪಿಗಳು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದ ಖಚಿತ ಮಾಹಿತಿಯನ್ನು ಮೇರೆಗೆ ಸ್ಥಳಕ್ಕೆ ಧಾವಿಸಿದ್ದಾರೆ.

ಬಳಿಕ ಮೂವರು ವ್ಯಕ್ತಿಗಳ ಸಹಿತ 800 ಗ್ರಾಂ ಗಾಂಜಾ ಮತ್ತು ಸ್ಕೂಟರನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!