JDS ಮುಸ್ಲಿಂ ಸಮಾಜವನ್ನೇ ನಂಬಿಕೊಂಡು ಕೂತಿಲ್ಲ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್ನಿಂದ ಮುಸ್ಲಿಂ ಮುಖಂಡರು ದೂರ ಸರಿಯುತ್ತಿರುವ ಬಗ್ಗೆ ಪಕ್ಷದ ನಾಯಕ ಹೆಚ್ಡಿ ಕುಮಾರಸ್ವಾಮಿ ತೀಕ್ಷ್ಣವಾದ ಮಾತುಗಳನ್ನಾಡಿದ್ದಾರೆ.
ಮಾದ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮಾಜವನ್ನೇ ನಂಬಿಕೊಂಡು ಕೂತಿಲ್ಲ. ಅದೊಂದು ಸಮುದಾಯವನ್ನು ನೆಚ್ಚಿಕೊಂಡು ರಾಜಕೀಯ ಮಾಡುತ್ತಿಲ್ಲ. ಕರ್ನಾಟಕದ ಆರೂವರೆ ಕೋಟಿ ಜನತೆಯ ಪ್ರತಿನಿಧಿಯಾಗಿ ನಮ್ಮ ಪಕ್ಷವಿದೆ ಎಂದು ಹೇಳಿದ್ದಾರೆ.