ಕರ್ತವ್ಯನಿರತ ವೈದ್ಯ ಅನುಮಾನಾಸ್ಪದವಾಗಿ ಸಾವು
ಚಾಮರಾಜನಗರ: ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಮಿಳುನಾಡು ಮೂಲದ ಡಾ. ಸಿಂಧುಜಾ (28) ಶುಕ್ರವಾರ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ.
ಡಾ. ಸಿಂಧುಜಾ ಅವರು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರಾಗಿ ಕಳೆದ ಒಂದು ವರ್ಷದಿಂದ ಕೆಲಸ ಮಾಡುತ್ತಿದ್ದರು. ಮಹದೇಶ್ವರ ಕಾಲೇಜು ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಶುಕ್ರವಾರ ಮನೆಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ




