2,000 ರೂ. ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಕಾಲಾವಧಿ ವಿಸ್ತರಣೆ: ಆರ್‌ಬಿಐ
ನವ ದೆಹಲಿ: ಈಗಾಗಲೇ ಚಲಾವಣೆಯಿಂದ ಹಿಂಪಡೆಯಲಾಗಿರುವ 2,000 ರೂ. ಮುಖಬೆಲೆಯ ನೋಟುಗಳನ್ನು ಮರಳಿಸಲು ಮತ್ತು ವಿನಿಮಯ ಮಾಡಿಕೊಳ್ಳಲು ಸೆಪ್ಟೆಂಬರ್ 30ರವರೆಗೆ ನೀಡಲಾಗಿದ್ದ ಕಾಲಾವಕಾಶವನ್ನು ಒಂದು ತಿಂಗಳ ಕಾಲ ವಿಸ್ತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು.
ಈ ಕುರಿತು ಆರ್‌ಬಿಐ ಸ್ಪಷ್ಟನೆ ನೀಡಿದ್ದು, 2,000 ರೂ ಮುಖಬೆಲೆಯ ನೋಟುಗಳನ್ನು ಮರಳಿಸಲು ಮತ್ತು ವಿನಿಮಯ ಮಾಡಿಕೊಳ್ಳಲು ಅಕ್ಟೋಬರ್ 7ವರೆಗೆ ಅವಕಾಶ ನೀಡಲಾಗುವುದು ಎಂದು ಹೇಳಿದೆ.